ಮುಂಬೈ:
ಟಿ-20 ಕ್ರಿಕೆಟ್‍ನಲ್ಲಿ 6 ಸಿಕ್ಸರ್ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದ ಎಡಗೈ ಸ್ಫೋಟಕ ಆಟಗಾರ ಯುವರಾಜ್ ಸಿಂಗ್ ಎಲ್ಲ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ನಿವೃತ್ತಿ ನಿರ್ಧಾರ ಪ್ರಕಟಿಸಿದ ಯುವರಾಜ್ ಸಿಂಗ್, “ನಾನೀಗ ವಿದಾಯ ಹೇಳುವ ಸಮಯ. ಅತ್ಯದ್ಭುತ ಪಯಣ ನನ್ನದು. ಆದರೆ ಈಗ ಅದನ್ನು ಅಂತಿಮಗೊಳಿಸುವ ಸಮಯ ಬಂದಿದೆ” ಎಂದು ತಿಳಿಸಿದ್ದಾರೆ.
ಕ್ಯಾನ್ಸರ್ನಿಂದ ಗುಣಮುಖರಾದ ಯುವರಾಜ್ ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್ಗೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ, ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ ಯುವರಾಜ್ ಸಿಂಗ್ ವಿದೇಶದಲ್ಲಿ ನಡೆಯುವ ಟಿ-20 ಲೀಗ್ಗಳಲ್ಲಿ ಪಾಲ್ಗೊಳ್ಳುವ ಆಲೋಚನೆಯಲ್ಲಿದ್ದಾರೆ. ಅಲ್ಲಿ ಸಿಗುವ ಅವಕಾಶ ಬಳಸಿಕೊಂಡು ತಮ್ಮ ವೃತ್ತಿ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ.
2000 ನೇ ಇಸವಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಯುವರಾಜ್ ಕೀನ್ಯ ಎದುರು ಮೊದಲ ಪಂದ್ಯವಾಡಿದ್ದರು. ಒಟ್ಟು 304 ಏಕದಿನ ಪಂದ್ಯಗಳಲ್ಲಿ 8, 701 ರನ್ ಗಳಿಸಿರುವ ಯುವಿ 14 ಶತಕ ಬಾರಿಸಿದ್ದಾರೆ.
ಭಾರತ 2007ರಲ್ಲಿ ಟಿ-20 ವಿಶ್ವಕಪ್ ಮತ್ತು 2011ರಲ್ಲಿ ವಿಶ್ವಕಪ್ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್ ಸಿಂಗ್ ಎಲ್ಲ ಮಾದರಿಯ ಅಂತರ್ ರಾಷ್ಟ್ರೀಯ ಕ್ರಿಕೆಟಿಗೂ ವಿದಾಯ ಘೋಷಿಸಿರುವುದಾಗಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ