ದೆಹಲಿ:

ಸೌದಿ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಅವರ ಭಾರತ ಪ್ರವಾಸದದಿಂದಾಗಿ ಸೌದಿ ಅರೇಬಿಯಾದಲ್ಲಿರುವ 850 ಭಾರತೀಯ ಕೈದಿಗಳಿಗೆ ಬಿಡುಗಡೆ ಭಾಗ್ಯ ಲಭಿಸಿದೆ.
ಹೌದು, ಪ್ರಸ್ತುತ ಭಾರತ ಪ್ರವಾಸದಲ್ಲಿರುವ ಸೌದಿ ದೊರೆ ಮಹಮದ್ ಬಿನ್ ಸಲ್ಮಾನ್ ವಿವಿಧ ಪ್ರಕರಣಗಳಲ್ಲಿ ಸಿಲುಕಿ ತಮ್ಮ ದೇಶದ ವಿವಿಧ ಜೈಲುಗಳಲ್ಲಿರುವ ಭಾರತ ಮೂಲದ ಸುಮಾರು 850 ಖೈದಿಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ.
Another big deliverable!
At the request of the PM @narendramodi, His Royal Highness the Crown Prince of Saudi Arabia has ordered the release of 850 Indian prisoners lodged in Saudi jails. pic.twitter.com/jIVTCbIRLa
— Raveesh Kumar (@MEAIndia) February 20, 2019
ನಿನ್ನೆಯಷ್ಟೇ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಸೌದಿ ರಾಜಕುಮಾರ ಬಳಿಕ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನೂ ಭೇಟಿಯಾಗಿದ್ದರು. ಈ ವೇಳೆ ಪ್ರಧಾನಿ ಮೋದಿ ಮತ್ತು ಸುಷ್ಮಾ ಸ್ವರಾಜ್ ಅವರ ಮನವಿಯ ಮೇರೆಗೆ ಸೌದಿ ದೊರೆ ಇಂತಹುದೊಂದು ಪ್ರಮುಖ ನಿರ್ಣಯ ಕೈಗೊಂಡಿದ್ದಾರೆ.
ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದು, ಕೈದಿಗಳ ಬಿಡುಗಡೆಯ ಆದೇಶದ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








