ಶ್ರೀನಗರ:
ಉಗ್ರರು ನಡೆಸಿದ ದಾಳಿಯಲ್ಲಿ CRPF ನ ಐವರು ಯೋಧರು ಹುತಾತ್ಮರಾಗಿರುವ ಘಟನೆ ಅನಂತನಾಗ್ ಜಿಲ್ಲೆಯ ಕೆ.ಪಿ. ರೋಡ್ನಲ್ಲಿ ನಡೆದಿದೆ.
Jammu and Kashmir: Terrorists attack police party at KP road in Anantnag; heavy firing underway. (Visuals deferred by unspecified time) pic.twitter.com/Flm1X42FdR
— ANI (@ANI) June 12, 2019
ಗಸ್ತು ತಿರುಗುವ ಕರ್ತವ್ಯದಲ್ಲಿ ನಿರತರಾಗಿದ್ದ ಯೋಧರ ಮೇಲೆ ಉಗ್ರರು ಏಕಾಏಕಿ ಗುಂಡು ಹಾರಿಸಿದ್ದಾರೆ. ಜತೆಗೆ ಗ್ರೆನೇಡ್ಗಳನ್ನೂ ಎಸೆದು ಪರಾರಿಯಾಗಿದ್ದಾರೆ. ಈ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ.
ಈ ಘಟನೆಯ ಬಳಿಕ ಪೊಲೀಸರು, ಸಿಆರ್ಪಿಎಫ್ ಮತ್ತು ಇತರ ಸೇನಾ ಸಿಬಂದಿ ತತ್ಕ್ಷಣ ಶೋಧ ಕಾರ್ಯ ಆರಂಭಿಸಿದರು. ಈ ಸಂದರ್ಭ ಉಗ್ರರ ಜತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರ ಪೈಕಿ ಒಬ್ಬನನ್ನು ಕೊಂದು ಹಾಕಲಾಗಿದೆ. ಇನ್ನೊಬ್ಬ ಉಗ್ರ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಅಲ್ ಉಮರ್ ಮುಜಾಹಿದ್ದೀನ್ ಎಂಬ ಸಂಘಟನೆ ಕೃತ್ಯದ ಹೊಣೆ ಹೊತ್ತಿದೆ.
ಕಳೆದ ಕೆಲ ತಿಂಗಳ ಹಿಂದೆ ಕಣಿವೆ ನಾಡಿನಲ್ಲಿ ಅಟ್ಟಹಾಸ ಮೆರೆದಿದ್ದ ಉಗ್ರರು ಇದೀಗ ಮತ್ತೊಮ್ಮೆ ಬಾಲ ಬಿಚ್ಚಿದ್ದಾರೆ.ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








