ಬೆಂಗಳೂರು :
ಸಚಿವ ಡಿ.ಕೆ ಶಿವಕುಮಾರ್ ಐಟಿ ವಿಚಾರಣೆ ಹಿನ್ನೆಲೆಯಲ್ಲಿ ಇಂದು ಇನ್ ಕಂ ಟ್ಯಾಕ್ಸ್ ಕಚೇರಿಗೆ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.
ವಿಚಾರಣೆ ವೇಳೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇನ್ ಕಾಂ ಟ್ಯಾಕ್ಸ್ ಕಚೇರಿ ಎದುರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಬಿಜೆಪಿ ಐಟಿಯನ್ನು ದುರ್ಬಳಕೆ ಮಾಡುತ್ತಿದೆ. ಕಾಂಗ್ರೆಸ್ ವಿರುದ್ಧ ಐಟಿ ಅಸ್ತ್ರದಿಂದ ದಬ್ಬಾಳಿಕೆ ನಡೆಸುತ್ತಿದೆ ಎಂದು ಅರೋಪಿಸಿ ಯೂತ್ ಕಾಂಗ್ರೆಸ್ ನ ಸುಮಾರು ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ