ಬೆಂಗಳೂರು:
ಆದಾಯ ತೆರಿಗೆ ಇಲಾಖೆ ದಾಳಿ, ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮತ್ತಿತರ ಕಿರುಕುಳಗಳ ಹಿಂದೆ ರಾಜಕೀಯ ಒತ್ತಡ ಹಾಗೂ ದುರುದ್ದೇಶವಿದ್ದು, ರಾಜಕೀಯ ಎದುರಾಳಿಗಳಿಗೆ ರಾಜಕೀಯವಾಗಿಯೇ ಉತ್ತರ ಕೊಡುತ್ತೇನೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ನನ್ನ ಮೇಲೆ ಎಷ್ಟೇ ದೂರುಗಳು ದಾಖಲಾದರೂ ನಾನೇ ಎದುರಿಸುತ್ತೇನೆ ನನ್ನ ಪರವಾಗಿ ಯಾವುದೇ ಪ್ರತಿಭಟನೆ, ಹೋರಾಟ ಬೇಡ ಎಂದು ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ತಮಗೆ ಈ ನೆಲದ ಕಾನೂನಿನ ಮೇಲೆ ಅಪಾರ ಗೌರವ ಮತ್ತು ನಂಬಿಕೆ ಇದೆ. ತಮಗೆ ಎದುರಾಗಿರುವ ಸವಾಲು ಹಾಗೂ ಸಮಸ್ಯೆಗಳನ್ನು ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಎದುರಿಸುವ ಶಕ್ತಿಯೂ ತಮಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
