ಗ್ಯಾಂಗ್​ರೇಪ್ : ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಯುವತಿ ಸಾವು!

ನವದೆಹಲಿ:

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಯುವತಿ ಇಂದು ಸಾವು

    2 ವಾರಗಳ ಹಿಂದೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ ಮಂಗಳವಾರ ಬೆಳಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

     ಯುವತಿಯ ಮೇಲೆ ಹಥ್ರಾಸ್‌ನ ಹಳ್ಳಿಯೊಂದರಲ್ಲಿ ನಾಲ್ವರು ದುಷ್ಕಮಿಳು ಅತ್ಯಾಚಾರ ನಡೆಸಿದ್ದರು. ಸರಿಯಾಗಿ ಸಹಕರಿಸಲಿಲ್ಲವೆಂದು ಈಕೆಯನ್ನು ಕತ್ತು ಹಿಸುಕಿ ಕೊಲ್ಲಲೂ ಯತ್ನಿಸಿದ್ದರು. ಈ ನರಳಾಟದಲ್ಲಿ ಆಕೆ ತನ್ನ ನಾಲಗೆಯನ್ನೇ ಹಲ್ಲಿನಿಂದ ಕಚ್ಚಿಕೊಂಡು ಗಂಭೀರ ಗಾಯ ಮಾಡಿಕೊಂಡಿದ್ದಳು.

     ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಯುವತಿಯ ಮೈ ಮೇಲೆ ಹಲವು ಗಾಯವಾಗಿದ್ದವು. ನಂತರ ಈಕೆಯನ್ನು ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಈಕೆಯ ಎರಡೂ ಕಾಲುಗಳು ನಿಷ್ಕ್ರಿಯಗೊಂಡಿದ್ದವು. ಈಕೆಯ ಕೈಗಳೂ ಸ್ವಲ್ಪಮಟ್ಟಿಗೆ ಸ್ವಾಧೀನ ಕಳೆದುಕೊಂಡಿದ್ದವು. ಈಕೆಯನ್ನು ವೆಂಟಿಲೇಟರ್​ನಲ್ಲಿಟ್ಟು ಬದುಕಿಸುವ ಪ್ರಯತ್ನಗಳು ನಡೆದಿದ್ದವು. ಆದರೆ ಅಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ನಿನ್ನೆ ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದುತರಲಾಗಿತ್ತು. ಆದರೆ, ಇಲ್ಲಿಯೂ ಆರೋಗ್ಯ ಸುಧಾರಣೆ ಕಾಣದೆ ಇಂದು ಇಹಲೋಕ ತ್ಯಜಿಸಿದ್ದಾಳೆ. ನಂತರ ಈಕೆಯನ್ನು ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಈಕೆಯ ಎರಡೂ ಕಾಲುಗಳು ನಿಷ್ಕ್ರಿಯಗೊಂಡಿದ್ದವು. ಈಕೆಯ ಕೈಗಳೂ ಸ್ವಲ್ಪಮಟ್ಟಿಗೆ ಸ್ವಾಧೀನ ಕಳೆದುಕೊಂಡಿದ್ದವು. ಈಕೆಯನ್ನು ವೆಂಟಿಲೇಟರ್​ನಲ್ಲಿಟ್ಟು ಬದುಕಿಸುವ ಪ್ರಯತ್ನಗಳು ನಡೆದಿದ್ದವು. ಆದರೆ ಅಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ನಿನ್ನೆ ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದುತರಲಾಗಿತ್ತು. ಆದರೆ, ಇಲ್ಲಿಯೂ ಆರೋಗ್ಯ ಸುಧಾರಣೆ ಕಾಣದೆ ಇಂದು ಇಹಲೋಕ ತ್ಯಜಿಸಿದ್ದಾಳೆ.

     ಮಹಿಳೆ ದಲಿತ ಯುವತಿಯಾಗಿದ್ದು ನಾಲ್ವರು ಆರೋಪಿಗಳು ಮೇಲ್ಜಾತಿಗೆ ಸೇರಿದವರಾಗಿದ್ದಾರೆ. ಪ್ರಸ್ತುತ ಎಲ್ಲಾ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ.

     ಘಟನೆ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ ಆದರೆ ಸಾರ್ವಜನಿಕರ ಆಕ್ರೋಶದ ನಂತರ ಪ್ರತಿಕ್ರಿಯಿಸಿದರು ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ