ನವದೆಹಲಿ :
ಹಿಂದೂ ಅವಿಭಜಿತ ಕುಟುಂಬದ ಆಸ್ತಿಯಲ್ಲಿ ಪಾಲು ಹೊಂದಲು ಹೆಣ್ಣುಮಕ್ಕಳಿಗೂ ಆಸ್ತಿ ಮೇಲೆ ಹಕ್ಕು ಇರಬೇಕು ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ.
2005ರ ಹಿಂದೂ ಉತ್ತರಾಧಿಕಾರಿ ತಿದ್ದುಪಡಿ ಕಾಯ್ದೆ ಪ್ರಕಾರ ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕು ಇದೆ ಎಂದು ನ್ಯಾ| ಅರುಣ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಸುಪ್ರೀಂ ನ್ಯಾಯಪೀಠ ಹೇಳಿದೆ.
2005ರಲ್ಲಿ ತಂದೆ ಮತ್ತು ಮಗಳು ಜೀವಂತವಾಗಿದ್ದರೆ ಮಾತ್ರ ಅಪ್ಪನ ಆಸ್ತಿಯಲ್ಲಿ ಮಗಳು ಆಸ್ತಿ ಪಡೆಯುವ ಹಕ್ಕು ಹೊಂದಿರುತ್ತಾರೆ ಎಂದು ಈ ಮುಂಚಿನ ಕೆಲ ಪ್ರಕರಣಗಳಲ್ಲಿ ಇದೇ ಸರ್ವೋಚ್ಚ ನ್ಯಾಯಾಲಯದ ನ್ಯಾಯಪೀಠಗಳು ತೀರ್ಪು ನೀಡಿದ್ದರು. ಅದರಂತೆ ಆ ವಿಚಾರದಲ್ಲಿ ಗೊಂದಲ ಉಳಿದೇ ಇತ್ತು. ಈಗ ಇವತ್ತು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಈ ಗೊಂದಲ ಬಗೆಹರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ