ದಾವಣಗೆರೆ:
ನೆರೆಯಿಂದ ತತ್ತರಿಸುವ ಉತ್ತರ ಕರ್ನಾಟಕವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿರುವುದರ ವಿರುದ್ಧ ಬಿಜೆಪಿ ಶಾಸಕರು, ಸಂಸದರು ಮುನಿಸಿಕೂಂಡಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೋದಿ ವಿರುದ್ಧವೇ ವಾಗ್ದಾಳಿ ನಡೆಸಿದ ಬೆನ್ನಲ್ಲಿ ಈಗ ಬಿಜೆಪಿ ಸಂಸದ ಜಿ.ಎಂ.ಸಿದ್ಧೇಶ್ವರ ಅವರೂ ಸಹ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದು ವಿಳಂಬವಾಗಿದೆ, ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ’ ಎಂದು ಹೇಳಿದ್ದಾರೆ. ಪ್ರವಾಹ ನಷ್ಟ ಅಂದಾಜು ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವುದು ಗೊತ್ತಿಲ್ಲ, ಆದರೆ ಪರಿಹಾರ ನೀಡದೇ ಹೋದರೆ ರಾಜೀನಾಮೆ ನೀಡುವುದು ಖಂಡಿತ ಎಂದು ಸಿದ್ದೇಶ್ವರ ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ