ಅಭಿನಂದನ್​ ಭೇಟಿ ಮಾಡಿದ ರಕ್ಷಣಾ ಸಚಿವೆ

ದೆಹಲಿ:

       ನಾಲ್ಕು ದಿನಗಳ ಹಿಂದೆ ಪಾಕ್​​ ಸೇನೆಯಿಂದ ಬಂಧಿತರಾಗಿ, ನಿನ್ನೆ ರಾತ್ರಿ ಬಿಡುಗಡೆಯಾಗಿ ಬಂದಿರುವ ವಿಂಗ್ ಕಮಾಂಡರ್​​​​ ಅಭಿನಂದನ್​ ವರ್ಧಮಾನ್​​ ಅವರನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​​ ಇಂದು ಭೇಟಿ ಮಾಡಿದರು.

      ಭಾರತದ ವಾಯುಗಡಿ ದಾಟಿ ಬಂದ ಪಾಕಿಸ್ತಾನದ ಯುದ್ಧ ವಿಮಾನಗಳನ್ನು ಹಿಮ್ಮೆಟ್ಟಿಸುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿ ಬಂಧಿಯಾಗಿದ್ದ ಭಾರತೀಯ ವಾಯು ಸೇನೆಯ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ನಿನ್ನೆ(ಶುಕ್ರವಾರ) ರಾತ್ರಿ 9.15 ಕ್ಕೆ ವಿಂಗ್​ ಕಮಾಂಡರ್​ ಅಭಿನಂದನ್​ ಅವರು ತಾಯ್ನಾಡಿಗೆ ಆಗಮಿಸಿದ್ದರು.

      ನಂತರ ಅವರನ್ನು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಭಿನಂದನ್​ ಅವರು ಚಿಕಿತ್ಸೆ ಪಡೆಯುತ್ತಿರುವಲ್ಲಿಗೇ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್​, ಕುಶಲೋಪರಿ ವಿಚಾರಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ