ದೆಹಲಿ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್!!

ನವದೆಹಲಿ :

      ರಾಷ್ಟ್ರ ರಾಜಧಾನಿ ದೆಹಲಿಯ 6 ನೇ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಕೇಂದ್ರ ಮುಖ್ಯ ಚುನಾವಣಾಧಿಕಾರಿ ಸುನೀಲ್ ಅರೋರಾ ಅವರು ಇಂದು ವೇಳಾಪಟ್ಟಿ ಪ್ರಕಟಗೊಳಿಸಿದ್ದಾರೆ.

      ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿ 8 ರಂದು ಒಂದೇ ಹಂತದಲ್ಲಿ ದೆಹಲಿ ವಿಧಾನಸಭೆಗೆ ಮತದಾನ ನಡೆಯಲಿದ್ದು, ಇಂದಿನಿಂದಲೇ ದೆಹಲಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿದರು.

     ನಾಮಪತ್ರಗಳನ್ನು ಸಲ್ಲಿಸಲು ಜನವರಿ 21 ಕೊನೆಯ ದಿನವಾಗಿದೆ. ಜ. 23ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸಲ್ಲಿಕೆಯಾದ ನಾಮಪತ್ರಗಳನ್ನು ವಾಪಸ್ ಪಡೆಯಲು ಜ. 24ಕೊನೆಯ ದಿನವಾಗಿದೆ.

          ದೆಹಲಿಯಲ್ಲಿ ಅಸ್ತಿತ್ವದಲ್ಲಿರುವ ಆಮ್ ಆದ್ಮಿ ಸರ್ಕಾರದ ಅವಧಿ ಫೆಬ್ರವರಿ 22ಕ್ಕೆ ಕೊನೆಗೊಳ್ಳಲಿದ್ದು, ಚುನಾವಣಾ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬರಲಿದೆ. ಜ. 14ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಫೆ. 11ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ