ಪ್ರತಿಭಟನಾ ನಿರತ ರೈತರ ಭೇಟಿ : ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್!

ನವದೆಹಲಿ :

      ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿದ್ದ ಕಾರಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ.

       ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರ ಸೌರಭ್ ಭಾರದ್ವಾಜ್, ದೆಹಲಿ ಪೊಲೀಸರು ಕೇಜ್ರೀವಾಲ್ ಅವರನ್ನು ಗೃಹಬಂಧನದಲ್ಲಿಇರಿಸಿದೆ. ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಂಗ್ಯೂ ಬಾರ್ಡರ್ ನಲ್ಲಿ ರೈತರನ್ನು ಭೇಟಿ ಮಾಡಿದ ನಂತರ ಗೃಹ ಬಂಧನದಲ್ಲಿರಿಸಲಾಗಿದೆ. ಅವರ ನಿವಾಸಕ್ಕೆ ತೆರಳಲು ಅಥವಾ ಒಳಗೆ ಹೋಗಲು ಯಾರಿಗೂ ಅನುಮತಿ ನೀಡಿಲ್ಲ. ಭಾರಿ ಬ್ಯಾರಿಕೇಡ್ ಗಳಿದ್ದು, ಮನೆ ಕೆಲಸದಾಳು ಕೂಡ ಮನೆಯೊಳಗೆ ಪ್ರವೇಶ ನೀಡುತ್ತಿಲ್ಲ’ ಎಂದು ಅವರು ಆರೋಪಿಸಿದರು. ಸಿಎಂ ನಿವಾಸದತ್ತ ನಾವೆಲ್ಲರೂ ಪಾದಯಾತ್ರೆ ನಡೆಸಿ, ಮುಖ್ಯಮಂತ್ರಿ ಬಿಡುಗಡೆ ಮಾಡುತ್ತೇವೆ ಎಂದೂ ಹೇಳಿದರು.

     ನಿನ್ನೆ ಸಿಂಗು ಬಾರ್ಡರ್ ನಲ್ಲಿ ರೈತರನ್ನು ಭೇಟಿ ಮಾಡಿದ ನಂತರ ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಟ್ವೀಟ್ ಮಾಡಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link