ಕೇಜ್ರಿವಾಲ್ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್!!

ನವದೆಹಲಿ :

      ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭರ್ಜರಿ ಗೆಲುವಿನೊಂದಿಗೆ ಮತ್ತೆ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ದೆಹಲಿ ಗದ್ದುಗೆ ಏರಲು ಮುಹೂರ್ತ ಫಿಕ್ಸ್ ಆಗಿದೆ.

      ಫೆಬ್ರವರಿ 14ರಂದು ಮತ್ತೆ ದೆಹಲಿಯ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  2015ರಲ್ಲಿ ರಾಮ್ ಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸಿದ್ದು ಫೆಬ್ರವರಿ 14ರಂದು ಎಂಬುದು ವಿಶೇಷ. ಫೆಬ್ರವರಿ 14, 2018ರಂದು ಮೂರುವರ್ಷಗಳ ಅಧಿಕಾರ ಅವಧಿ ಕಂಡ ಕೇಜ್ರಿವಾಲ್ ಈಗ ಮತ್ತೊಮ್ಮೆ ಫೆಬ್ರವರಿ 14ದಿನದಂದೇ ಎಎಪಿ 3.0ಕ್ಕೆ ಚಾಲನೆ ನೀಡುವ ಸಾಧ್ಯತೆಯಿದೆ.

ದೆಹಲಿ ಚುನಾವಣೆ : ಗೆಲುವಿನ ನಗೆ ಬೀರಿದ ಆಮ್ ಆದ್ಮಿ ಪಕ್ಷ

      ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ 70 ವಿಧಾನಸಭಾ ಸ್ಥಾನಗಳಲ್ಲಿ ಆಡಳಿತಾರೂಢ ಅಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ 08 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇನ್ನು ಕಾಂಗ್ರೆಸ್ ಹೇಳಲು ಹೆಸರಿಲ್ಲದಂತೆ ಧೂಳಿಪಟವಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap