ನವದಹಲಿ:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಸ್ತಿ ಮೌಲ್ಯ ಐದು ವರ್ಷದಲ್ಲಿ 1.3 ಕೋಟಿ ರೂಗಳಷ್ಟು ಹೆಚ್ಚಳವಾಗಿದೆ.
ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಸಿಎಂ ಅರವಿಂದ ಕೇಜ್ರಿವಾಲ್ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಆಸ್ತಿ ಘೋಷಿಸಿ ಪ್ರಮಾಣ ಪತ್ರ ಸಲ್ಲಿಸಿದ ಅವರು, ತಮ್ಮ ಒಟ್ಟು ಆಸ್ತಿ ಮೌಲ್ಯ 3.4 ಕೋಟಿ ರೂ. ಎಂದು ಹೇಳಿದ್ದಾರೆ. 2015ರ ಚುನಾವಣೆ ವೇಳೆ ಕೇಜ್ರಿವಾಲ್ ಬಳಿ ಆಸ್ತಿ 2.1 ಕೋಟಿ ರೂ. ಇತ್ತು. ಕಳೆದ ಐದು ವರ್ಷದಲ್ಲಿ 1.3 ಕೋಟಿ ರೂ. ಹೆಚ್ಚಾಗಿದೆ.
ಪತ್ನಿ ಸುನೀತಾ ಕೇಜ್ರಿವಾಲ್ ಅವರ ಹಣ ಹಾಗೂ ಸ್ಥಿರ ಠೇವಣಿ ಐದು ವರ್ಷಗಳಲ್ಲಿ 15 ಲಕ್ಷದಿಂದ 57 ಲಕ್ಷ ರೂ.ಗೆ ಏರಿಕೆಯಾಗಿದೆ. ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು 2016 ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ಆಗ 32 ಲಕ್ಷ ಮೌಲ್ಯದಷ್ಟು ಪಿಂಚಣಿ ಹಣ ದೊರೆತಿದೆ. ಬಾಕಿಯ ಹಣ ಉಳಿತಾಯದ್ದಾಗಿ ಎಂದು ತಿಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ