ಸಕಲ ಸರ್ಕಾರಿ ಗೌರವದೊಂದಿಗೆ ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ!!!

ನವದೆಹಲಿ:

     ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ಲೋಧಿ ಚಿತಾಗಾರದಲ್ಲಿ ನಡೆಯಿತು.

      ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಅವರು ಅಂತಿಮ ವಿಧಿ, ವಿಧಾನ ನೆರವೇರಿಸಿದ್ದರು, ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. 

     ಮಾಜಿ ಅಧ್ಯಕ್ಷರ ನಿಧನದ ಹಿನ್ನಲೆ ಕೇಂದ್ರ ಗೃಹ ಸಚಿವಾಲಯ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಪ್ರಕಟಿಸಿದೆ.

     ರಾಷ್ಟ್ರೀಯ ಶೋಕಾಚರಣೆಯ ಸಮಯದಲ್ಲಿ, ದೇಶಾದ್ಯಂತ ಇರುವ ಸರ್ಕಾರಿ ಕಟ್ಟಡಗಳ ಮೇಲೆ ತ್ರಿವರ್ಣ ಧ್ವಜವನ್ನು ಅರ್ಧಕ್ಕೆ ಇಳಿಸಲಾಗುತ್ತಿದೆ ಮತ್ತು ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯುವುದಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ