ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 14ಕ್ಕೆ ಮುಂದೂಡಿಕೆ !!!

ನವದೆಹಲಿ :

      ದೆಹಲಿ ಹೈಕೋರ್ಟ್ ಗೆ ಡಿ.ಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 14ಕ್ಕೆ ಮುಂದೂಡಲಾಗಿದೆ.

     ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್, ಅಕ್ಟೋಬರ್ 14 ರೊಳಗೆ ಆಕ್ಷೇಪಣೆ ಇದ್ದರೆ ಸಲ್ಲಿಸುವಂತೆ ಸೂಚಿಸಿದ್ದಾರೆ.

       ಇಡಿ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಡಿ ಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಶುಕ್ರವಾರ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು.

      ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್ ಇನ್ನೂ 14 ದಿನ ಕನಕಪುರ ಬಂಡೆ ಸೆರೆಮನೆ ವಾಸ ಅನುಭವಿಸಬೇಕಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ