ಬೆಂಗಳೂರು ;
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಜಾಗ್ರತೆ ವಹಿಸಿದ್ದೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ನಾನು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿಲ್ಲ.
ಆದರೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳಿಗೆ ಆದಷ್ಟು ಬೇಗ ನೇಮಕ ಮಾಡುವಂತೆ ಅವರಲ್ಲಿ ಮಾತನಾಡಿದ್ದೇನೆ ಎಂದರು.
ಮಂಡ್ಯ ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದಿಂದ ಇನ್ನೂ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ. ಇನ್ನು ಮುಂದೆ ಚರ್ಚಿಸಿ ನಂತರ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.
