ಬೆಂಗಳೂರು :
ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಂದುವರಿಕೆಗೆ ಒಲವು ತೋರಿಸಿರುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.
ಅವರು ಇಂದು ಅವರು ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ವೆಬ್ ಸೈಟ್ ಅನ್ನು ಬಿಡುಗಡೆ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಅವರ ಜೊತೆ ಚರ್ಚೆ ನಡೆಸಿದ ಬಳಿಕ ಮೈತ್ರಿ ಮುಂದುವರೆಸುವ ಬಗ್ಗೆ ನಿರ್ಧಾರ ಮಾಡುತ್ತೇನೆ. ಮೈತ್ರಿ ಬಗ್ಗೆ ಸ್ಥಳೀಯ ಕಾಂಗ್ರೆಸ್ ನಾಯಕರ ಭಾವನೆ ಏನಿದೆ ಎಂಬುದು ಗೊತ್ತಿಲ್ಲ. ಅವರ ಪಕ್ಷದ ನಾಯಕರು ಮೈತ್ರಿ ಮುಂದುವರೆಸುವ ಕುರಿತು ಒಂದು ತೀರ್ಮಾನಕ್ಕೆ ಬಂದರೆ ಅದಕ್ಕೆ ನಮ್ಮ ಸಹಮತ ಇರುತ್ತದೆ ಎಂದು ಪರೋಕ್ಷವಾಗಿ ದೋಸ್ತಿ ಮುಂದುವರಿಕೆಗೆ ಸಿಗ್ನಲ್ ನೀಡಿದರು.
ಜೆಡಿಎಸ್ ಪಕ್ಷದ ಅಧಿಕೃತ ವೆಬ್ ಸೈಟ್ ಬಗ್ಗೆ ಮಾತನಾಡುತ್ತಾ, ಪ್ರಥಮ ಬಾರಿಗೆ ಪ್ರಾರಂಭ ಮಾಡಿದ್ದೇವೆ ಈ ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಅವರೇ ಸ್ವತಃ ಒಂದು ವೆಬ್ ಸೈಟ್ ಇಟ್ಟುಕೊಂಡಿದ್ದರು, ಇವತ್ತು ಪಕ್ಷದಿಂದ ಅಧೀಕೃತವಾಗಿ ವೆಬ್ ಸೈಟ್ ಅನ್ನು ಉದ್ಘಾಟನೆ ಮಾಡಲಾಗಿದೆ ಇದರಿಂದ ಪಕ್ಷದ ಕಾರ್ಯಕ್ರಮಗಳ ಕುರಿತಾದ ಪ್ರಚಾರಕ್ಕೆ ಅನುಕೂಲವಾಗಲಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ