ಮಹಾರಾಷ್ಟ್ರ : ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಸರ್ಕಾರ ರಚನೆ!!!

ನವದೆಹಲಿ :

      ಮಹಾರಾಷ್ಟ್ರದಲ್ಲಿ ಇನ್ನೇನು ಶಿವಸೇನೆ-ಕಾಂಗ್ರೆಸ್ -ಎನ್ ಸಿಪಿ ಸರ್ಕಾರ ರಚಿಸುತ್ತದೆ ಎಂದು ಅಂದುಕೊಳ್ಳುತ್ತಿರುವಾಗಲೇ ಬಿಜೆಪಿ – ಎನ್ ಸಿಪಿ ಸರ್ಕಾರ ನಿರ್ಮಿಸಿ ಅಚ್ಚರಿಗೆ ಕಾರಣವಾಗಿದೆ.

      ನೂತನ ಮುಖ್ಯಮಂತ್ರಿಯಾಗಿ ಮತ್ತೆ ದೇವೇಂದ್ರ ಫಡ್ನವಿಸ್ ಪದಗ್ರಹಣ ಮಾಡಿದ್ದು, ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರು ಪ್ರಮಾಣವಚಣ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಇಂದು ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್ ಪದಗ್ರಹಣ ಮಾಡಿದ್ದಾರೆ.

      ನಿನ್ನೆ ಸಂಜೆಯಷ್ಟೆ ಎನ್‌ಸಿಪಿ-ಶೀವಸೇನಾ-ಕಾಂಗ್ರೆಸ್ ಸರ್ಕಾರ ರಚನೆ ಮಾಡುವುದಾಗಿ ಹೇಳಿದ್ದವು. ಅದರಂತೆ ಉದ್ಧವ್ ಠಾಕ್ರೆಯನ್ನು ಸಿಎಂ ಎಂದು ಸಹ ಹೆಸರಿಸಲಾಗಿತ್ತು. ಆದರೆ ರಾತ್ರೋರಾತ್ರಿ ನಡೆದ ಬೆಳವಣಿಗೆಯಲ್ಲಿ ಬಿಜೆಪಿ-ಎನ್‌ಸಿಪಿ ಬಂಡಾಯ ಶಾಸಕರೊಂದಿಗೆ ಸೇರಿ ಬೆಳ್ಳಂಬೆಳಿಗ್ಗೆ ಸರ್ಕಾರ ರಚನೆ ಮಾಡಿಯೇ ಬಿಟ್ಟಿವೆ.

      ಹೆಚ್ಚು ಸ್ಥಾನ ಗೆದ್ದ ಬಿಜೆಪಿ ಜೊತೆ ಕೈಜೊಡಿಸಿ ಸರ್ಕಾರ ಮಾಡಲು ಶಿವಸೇನೆ ಹೆಚ್ಚು ಬೇಡಿಕೆಗಳನ್ನು ಮುಂದಿಟ್ಟಿತ್ತು. ಸಿಎಂ ಸ್ಥಾನ ನಮಗೆ ಬಿಟ್ಟುಕೊಡಬೇಕು, ಸಚಿವ ಸಂಪುಟದಲ್ಲಿ ಸಮವಾಗಿ ಸ್ಥಾನಗಳನ್ನು ಹಂಚಬೇಕು ಎಂದು ಪಟ್ಟು ಹಿಡಿದಿತ್ತು. ಆದರೆ ಇದಕ್ಕೆ ಬಿಜೆಪಿ ಒಪ್ಪಿರಲಿಲ್ಲ. ಇತ್ತ ಕಾಂಗ್ರೆಸ್ ಹೇಗಾದರೂ ಶಿವಸೇನೆ, ಎನ್‍ಸಿಪಿ ವಿಶ್ವಾಸಗಳಿಸಿ ಸರ್ಕಾರ ರಚನೆ ಮಾಡಲು ಮಾಸ್ಟರ್ ಪ್ಲಾನ್ ಮಾಡಿತ್ತು. ಆದರೆ ಈಗ ಈ ಎಲ್ಲಾ ಪ್ರಯತ್ನಕ್ಕೂ ನೀರೆರಚಿದಂತೆ ಆಗಿದ್ದು, ಸದ್ದಿಲ್ಲದೆ ಬಿಜೆಪಿ ಎನ್‍ಸಿಪಿ ಜೊತೆ ಸೇರಿಕೊಂಡು ದೇವೇಂದ್ರ ಫಡ್ನವಿಸ್ ಸಿಎಂ ಆಗಿ, ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap