ಹೈದರಾಬಾದ್ :
ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಜೀವ ದಹನವಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ವಲ್ಲೂರು ತಾಲೂಕಿನ ಗೋಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಟಿಪ್ಪರ್ ಲೋಡ್ ಮಾಡಿ ರಸ್ತೆಗೆ ಬಂದ ವೇಳೆ ಟಾಟಾ ಸುಮೋ ಡಿಕ್ಕಿ ಹೊಡೆದಿದೆ.
ಟಿಪ್ಪರ್ ಲಾರಿ ಡಿಕ್ಕಿ ರಭಸಕ್ಕೆ ಟಾಟಾ ಸುಮೊ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಟಾಟಾ ಸುಮೊದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಇನ್ನು ಘಟನೆಯಲ್ಲಿ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಕಡಪ ರಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿಯ ಕೆನ್ನಾಲಗೆಗೆ 3 ವಾಹನಗಳು ಸುಟ್ಟು ಕರಕಲಾಗಿವೆ. ಮೃತರು ತಮಿಳು ನಾಡಿನವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲೇ ಮೃತಪಟ್ಟ ನಾಲ್ವರು ತಮಿಳುನಾಡು ಮೂಲದವರು ಎನ್ನಲಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಕಡಪ ಆಸ್ಪತ್ರೆಗೆ ದಾಖಲಿಸಲಾಗಿದೆ.
![](https://prajapragathi.com/wp-content/uploads/2020/11/car-fire.jpg)