ಬೆಂಗಳೂರು :
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಅವರು ಇಡಿ ವಿಚಾರಣೆಗೆ ಹಾಜರಾಗಲು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಸೆ.12 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಅವರು ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ.
2017ರ ನವೆಂಬರ್ ತಿಂಗಳಿನಲ್ಲಿ ಶಿವಕುಮಾರ್ ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದರು. ಈಗ ಮತ್ತೆ ವಿಚಾರಣೆಗೆ ಬರುವಂತೆ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಬರುವಂತೆ ಇಡಿ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ