ಚೆನ್ನೈ :
ತಮ್ಮ ಹುಟ್ಟು ಹಬ್ಬದ ದಿನವೇ ಡಿಎಂಕೆ ಶಾಸಕ ಜೆ.ಅನ್ಬಳಗನ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜೂನ್ 2ರಂದು ಉಸಿರಾಟದ ತೊಂದರೆಯಿಂದ ಚೆನ್ನೈನ ಕ್ರೋಮ್ಪೇಟ್ನಲ್ಲಿರುವ ಡಾ.ರೇಲಾ ಇನ್ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ಗೆ ದಾಖಲಾಗಿದ್ದ ಇವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಅವರಲ್ಲಿ ಕೊರೊನಾ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಡಿಎಂಕೆ ಪಕ್ಷದ ಚೆನ್ನೈ ಪಶ್ಚಿಮ ಜಿಲ್ಲೆಯ ಕಾರ್ಯದರ್ಶಿಯೂ ಆಗಿದ್ದ ಇವರಿಗೆ 62 ವರ್ಷ ವಯಸ್ಸಾಗಿತ್ತು. ಇವರು ಕೊರೊನಾ ಸೋಂಕಿನಿಂದ ಮೃತಪಟ್ಟ ಮೊದಲ ಶಾಸಕರಾಗಿದ್ದಾರೆ.
3 ಬಾರಿ ಶಾಸಕರಾಗಿದ್ದ ಅನ್ಬಳಗನ್ 2001, 2011 ಹಾಗೂ 2016ರಲ್ಲಿ ಟಿ. ನಗರ್ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
