ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಹರಿಸದಿರಲು ಶಾಸಕನ ಪತ್ರ!!!

ಚಿಕ್ಕೋಡಿ :

     ಕರ್ನಾಟಕ ರಾಜ್ಯಕ್ಕೆ ನೀರು ಬಿಡುಗಡೆ ಮಾಡದಂತೆ ಮಹಾರಾಷ್ಟ್ರದ ಶಾಸಕರೊಬ್ಬರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಪತ್ರ ಬರೆದಿದ್ದಾರೆ.

     ಇತ್ತೀಚೆಗೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದು ಕೃಷ್ಣಾ ನದಿಗೆ ನೀರು ಹರಿಸಲು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿತ್ತು.

Image result for devendra fadnavis and shambhuraj desai

      ಇದನ್ನು ವಿರೋಧಿಸಿ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾಟಣ್ ಕ್ಷೇತ್ರದ ಶಾಸಕ ಶಂಭುರಾಜ ದೇಸಾಯಿ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಪತ್ರ ಬರೆದಿದ್ದು, 105 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದ ಕೊಯ್ನಾ ಡ್ಯಾಂ, ಪ್ರಸ್ತುತವಾಗಿ 36.89 ಟಿಎಂಸಿ ನೀರನ್ನು ಸಂಗ್ರಹಿಸಿದೆ. ಆದ್ದರಿಂದ ಕೊಯ್ನಾ ಡ್ಯಾಂ ನಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಬಾರದೆಂದು ತಿಳಿಸಿದ್ದಾರೆ.

2 ದಿನಗಳಲ್ಲಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು!!!

      ಕರ್ನಾಟಕದಲ್ಲಿ ಬತ್ತಿ ಬರಿದಾಗಿರೋ ಕೃಷ್ಣಾ ನದಿಯಿಂದಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

      ಮಹಾರಾಷ್ಟ್ರದ ಶಾಸಕರ ನಡೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಜಿಲ್ಲೆಗಳ ಜನರು ವ್ಯಾಪಕ ಖಂಡನೆ ವ್ಯಕ್ತಪಡಿಸುತ್ತಿದ್ದು, ರೈತರು ನೀರಿಗಾಗಿ ಮತ್ತೆ ಬೀದಿಗಿಳಿಯಲು ಮುಂದಾಗಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap