ಬೆಂಗಳೂರು:
ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆಯ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ.
ನಿರ್ದೇಶಕ ಇಂದ್ರಜಿತ್ ಈಗಾಗಲೇ ಸಿಸಿಬಿಗೆ ಹೇಳಿಕೆ ನೀಡಿದ್ದು, ಆ ಹೇಳಿಕೆಗಳಿಗೆ ಸಾಕ್ಷ್ಯ ನೀಡಿ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ನೋಟಿಸ್ ನೀಡಿರುವುದಾಗಿ ತಿಳಿಸಿದ್ದಾರೆ.
ಅವರು ಹೇಳುವಂತೆ, ಮೊನ್ನೆ ನಡೆದ ವಿಚಾರಣೆಯಲ್ಲಿ ಇಂದ್ರಜಿತ್ ಲಂಕೇಶ್ ಕೇವಲ ಹೇಳಿಕೆಗಳನ್ನ ಮಾತ್ರ ನೀಡಿದ್ದರು. ಆ ಹೇಳಿಕೆಗಳನ್ನ ಅನುಸರಿಸಿ ಆರೋಪಿಗಳನ್ನ ವಿಚಾರಣೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ತಮ್ಮ ಹೇಳಿಕೆಗಳ ಕುರಿತು ಸಾಕ್ಷ್ಯ ನೀಡಲು ಇಂದ್ರಜಿತ್‌ರನ್ನ ನಾಳೆ ಮತ್ತೆ ವಿಚಾರಣೆ ಕರೆಯಲಾಗಿದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
