ಐಜ್ವಾಲ್ (ಮಿಜೋರಾಂ):

ಈಶಾನ್ಯ ರಾಜ್ಯವಾದ ಮಿಜೋರಾಂನಲ್ಲಿ ಭೂಕಂಪ ಸಂಭವಿಸಿದ ಪರಿಣಾಮ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಕೆಲ ಪ್ರದೇಶಗಳ ರಸ್ತೆಗಳು ಬಿರುಕುಬಿಟ್ಟಿವೆ.
ಇಷ್ಟು ದಿನ ದೆಹಲಿ, ಹರ್ಯಾಣ ಸುತ್ತ ಸುತ್ತಮುತ್ತಲ ಭಾಗದಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿತ್ತು. ಇದೀಗ ಈ ಭೂಕಂಪ ಸರಣಿ ಈಶಾನ್ಯ ರಾಜ್ಯಗಳಿಗೂ ವ್ಯಾಪಿಸಿದೆ. ಮಿಜೋರಾಂನಲ್ಲೂ ಇದೀಗ ಪದೇ ಪದೇ ಭೂಮಿ ಕಂಪಿಸುತ್ತಿದೆ.
ಮಿಜೋರಾಂನಲ್ಲಿ ಇಂದು ನಸುಕಿನಲ್ಲಿ ಭೂಕಂಪ ಸಂಭವಿಸಿದ್ದು, ಅನೇಕ ಮನೆಗಳು ಮತ್ತು ಕಟ್ಟಡಗಳು ಕುಸಿದಿದ್ದು, ಹಲವರಿಗೆ ಗಾಯಗಳಾಗಿವೆ.
ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಗರ್ಭ ಅಧ್ಯಯನ ಕೇಂದ್ರ ತಿಳಿಸಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿವೆ. ರಸ್ತೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ ಎಂದು ರಾಜ್ಯ ಭೂಗರ್ಭ ಮತ್ತು ಖನಿಜ ಸಂಪನ್ಮೂಲ ಇಲಾಖೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








