ಭಿವಂಡಿ :
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಘಟನೆಯಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ ಎಂದು ರಕ್ಷಣಾ ಕಾರ್ಯಾಚರಣೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ವಾಣಿಜ್ಯ ನಗರಿ ಮುಂಬೈ ಸಮೀಪದಲ್ಲೇ ಇರುವ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ನಿನ್ನೆ ಮುಂಜಾನೆ ಸುಮಾರು 3.30ರ ಹೊತ್ತಿನಲ್ಲಿ ಮೂರು ಮಹಡಿ ಕಟ್ಟದ ಕುಸಿದು ಬಿದ್ದಿತ್ತು. ಈ ವೇಳೆ ಸುಮಾರು 20ರಿಂದ 25 ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳಕ್ಕೆ ಧೌಡಾಯಿಸಿ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಾಚರಣೆ ಮಾಡುತ್ತಿದೆ. ಈ ವರೆಗೂ 18 ದೇಹಗಳನ್ನು ಸಿಬ್ಬಂದಿ ಹೊರಗೆ ತೆಗೆದಿದ್ದು, ಅಂತೆಯೇ ಮಗು ಸೇರಿದಂತೆ 5 ಮಂದಿಯನ್ನು ರಕ್ಷಿಸಿದ್ದಾರೆ.
ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಗಳಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.
BHIWANDI BLDNG COLLAPSE: update 7
?@NDRFHQ teams on site
?More bodies extracted
?More likely under debris
?So far 18 dead extracted
?20 rescued live
?Ops continue
?Deep condolences of #NDRF ?to deceased’s families??@PMOIndia @HMOIndia @PIBHomeAffairs @PIBMumbai @ANI pic.twitter.com/Nsht4KFAsX— ѕαtчα prαdhαnसत्य नारायण प्रधान ସତ୍ଯପ୍ରଧାନ-DG NDRF (@satyaprad1) September 22, 2020
ಪ್ರಕರಣದ ತನಿಖೆಗೆಗಾಗಿ ಥಾಣೆ ಜಿಲ್ಲೆಯ ಹೆಚ್ಚುವರಿ ಆಯುಕ್ತ ಓಂಪ್ರಕಾಶ್ ದಿವ್ತೆ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಈಗಾಗಲೇ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಈ ವಿಚಾರವಾಗಿ ವಜಾಗೊಳಿಸಲಾಗಿದ್ದು, ಕಟ್ಟಡದ ಮಾಲೀಕನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‍ಡಿಆರ್‍ಎಫ್) ಮತ್ತು ಥಾಣೆ ವಿಪತ್ತು ನಿರ್ವಹಣಾ ಪಡೆ (ಡಿಟಿಆರ್‍ಎಫ್) ಕಾರ್ಯಕರ್ತರು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ