ದಸರಾ ಗೂ ಸಿಗಲಿಲ್ಲ ರಿಲೀಫ್ : ಅ.15 ವರೆಗೆ ಡಿಕೆಶಿಗೆ ತಿಹಾರ್ ಜೈಲೇ ಗತಿ!!

ನವದೆಹಲಿ:

      ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.

      ಹೌದು, ಡಿಕೆಶಿ ಅವರಿಗೆ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ.)ದ ವಿಶೇಷ ಕೋರ್ಟ್​ ವಿಸ್ತರಿಸಿದೆ. ಅಲ್ಲದೆ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ನಿಗದಿಪಡಿಸಿದೆ. 15ರವರೆಗೆ ತಿಹಾರ್​ ಜೈಲಿನಲ್ಲೇ ಇರುವಂತೆ ಆದೇಶ ನೀಡಿದೆ.

       ಇಂದು ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್​ಕುಮಾರ್ ಕುಹರ್​ ಅವರು ಡಿ.ಕೆ.ಶಿವಕುಮಾರ್​ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಆಕ್ಟೋಬರ್ 15 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

      ಬಂಧನದ ವೇಳೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿರುವ ನ್ಯಾಯಾಲಯದ ಮತ್ತೆ ಡಿಕೆಶಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಮುಂದಿನ ಎರಡು ವಾರಗಳ ಕಾಲ ಡಿಕೆಶಿ ಜೈಲಿನಲ್ಲೇ ಕಳೆಯುವಂತಹ ತೀರ್ಪು ನೀಡಿದೆ.

      ಈ ಮೂಲಕ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈ ನಡುವೆ ಅವರು ಈ ಬಾರಿಯ ದಸರಾ ಹಬ್ಬವನ್ನ ತಿಹಾರ್‌ ಜೈಲಿನಲ್ಲೇ ಆಚರಣೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap