ನವದೆಹಲಿ:
ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.
ಹೌದು, ಡಿಕೆಶಿ ಅವರಿಗೆ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ.)ದ ವಿಶೇಷ ಕೋರ್ಟ್ ವಿಸ್ತರಿಸಿದೆ. ಅಲ್ಲದೆ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ನಿಗದಿಪಡಿಸಿದೆ. 15ರವರೆಗೆ ತಿಹಾರ್ ಜೈಲಿನಲ್ಲೇ ಇರುವಂತೆ ಆದೇಶ ನೀಡಿದೆ.
ಇಂದು ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್ಕುಮಾರ್ ಕುಹರ್ ಅವರು ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಆಕ್ಟೋಬರ್ 15 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಬಂಧನದ ವೇಳೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿರುವ ನ್ಯಾಯಾಲಯದ ಮತ್ತೆ ಡಿಕೆಶಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಮುಂದಿನ ಎರಡು ವಾರಗಳ ಕಾಲ ಡಿಕೆಶಿ ಜೈಲಿನಲ್ಲೇ ಕಳೆಯುವಂತಹ ತೀರ್ಪು ನೀಡಿದೆ.
ಈ ಮೂಲಕ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈ ನಡುವೆ ಅವರು ಈ ಬಾರಿಯ ದಸರಾ ಹಬ್ಬವನ್ನ ತಿಹಾರ್ ಜೈಲಿನಲ್ಲೇ ಆಚರಣೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ