ಚೆನ್ನೈ:
ತಮಿಳುನಾಡಿನ ಕರೂರ್ ಜಿಲ್ಲೆಯ ಅರವಕುರಿಚಿ ಎಂಬಲ್ಲಿ ಗುರುವಾರ ರಾತ್ರಿ ನಡೆಯುತ್ತಿದ್ದ ಕಮಲ್ ಹಾಸನ್ ಕಾರ್ಯಕ್ರಮದಲ್ಲಿ ಜನರು ಮೊಟ್ಟೆ ಮತ್ತು ಕಲ್ಲುಗಳನ್ನು ಎಸೆದ ಘಟನೆ ವರದಿಯಾಗಿದೆ.
ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ ತೂರಿದ ಘಟನೆ ಹಸಿರಾಗಿರುವಂತೆಯೇ ಇಂದು ಮೊಟ್ಟೆ ತೂರಲಾಗಿದೆ. ಅಲ್ಲದೆ ಕಮಲ್ ಹಾಸನ್ ಕುಳಿತಿದ್ದ ವೇದಿಕೆಯತ್ತ ಕಲ್ಲು ತೂರಾಟ ನಡೆಸಲಾಗಿದೆ.
ಘಟನೆಯಲ್ಲಿ ನಟ ಕಮಲ್ ಹಾಸನ್ ಸೇರಿದಂತೆ ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಿ ಕಮಲ್ ಹಾಸನ್ ರನ್ನು ಸುರಕ್ಷಿತವಾಗಿ ಬೇರೆಡೆ ರವಾನೆ ಮಾಡಿದ್ದಾರೆ.
ಮೇ 13 ರಂದು ತಮಿಳುನಾಡಿನ ಅರವಕುರಿಚಿಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದು, ಅವನ ಹೆಸರು ನಾಥುರಾಮ್ ಗೋಡ್ಸೆ. ಅಲ್ಲಿಂದ ಭಯೋತ್ಪಾದನೆ ಶುರುವಾಯಿತು” ಎಂದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ