ದೆಹಲಿ :
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಣೆ ಮಾಡಿದೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ,‘ 81 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಾರ್ಖಂಡ್‌ನಲ್ಲಿ ನವೆಂಬರ್ 30ರಂದು ಮೊದಲ ಹಂತದ ಮತದಾನ ನಡೆಯಲಿದೆ’ ಜಾರ್ಖಂಡ್ ವಿಧಾನಸಭೆಯ ಅವಧಿ ಜನವರಿ 5 ಕ್ಕೆ ಕೊನೆಗೊಳ್ಳಲಿದೆ ಎಂದು ತಿಳಿಸಿದರು.
Chief Election Commissioner, Sunil Arora: Phase-1: Polls on 30 November, phase 2: Polls on 7 December, phase 3: Polls on 12 December, phase 4: Polls on 16th December, phase 5: Polls on 20th December, and counting on 23rd December. https://t.co/ZI432DMXdo pic.twitter.com/AhZiX4TAw3
— ANI (@ANI) November 1, 2019
ಮತದಾನದ ಮೊದಲ ಹಂತ ನವೆಂಬರ್ 30, ಎರಡನೇ ಹಂತ ಡಿಸೆಂಬರ್ 7, ಮೂರನೇ ಹಂತ ಡಿಸೆಂಬರ್ 12, ನಾಲ್ಕನೇ ಹಂತ ಡಿಸೆಂಬರ್ 16 ಮತ್ತು ಐದನೇ ಹಂತ ಡಿಸೆಂಬರ್ 20ರಂದು ನಡೆಯಲಿದೆ.
ಮತ ಎಣಿಕೆ ಕಾರ್ಯ ಡಿಸೆಂಬರ್ 23 ರಂದು ನಡೆಯಲಿದ್ದು, ಇಂದಿನಿಂದಲೇ ಜಾರ್ಖಂಡ್ ನಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ