‘ಪಿಎಂ ನರೇಂದ್ರ ಮೋದಿ’ ರಿಲೀಸ್ ಗೆ ಗ್ರೀನ್ ಸಿಗ್ನಲ್!!!

0
6

ನವದೆಹಲಿ: 

     ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಚಿತ್ರ ‘ಪಿಎಂ ನರೇಂದ್ರ ಮೋದಿ’ ಬಿಡುಗಡೆಗೆ ಚುನಾವಣಾ ಆಯೋಗ ಬುಧವಾರ ಗ್ರೀನ್ ಸಿಗ್ನಲ್ ನೀಡಿದೆ.

      ಬೆಂಗಳೂರು ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ‘ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿತ್ತು.

      ಇನ್ನು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಅವರಿದ್ದ ಪೀಠ  “ನಾವು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ; ನೀವು ಬೇಕಿದ್ದರೆ ಸೆನ್ಸಾರ್‌ ಮಂಡಳಿಗೆ ಹೋಗಿ ಇಲ್ಲವೇ ಚುನಾವಣಾ ಆಯೋಗಕ್ಕೆ ಹೋಗಿ” ಎಂದು ಅರ್ಜಿದಾರರಿಗೆ ಹೇಳಿ, ಅರ್ಜಿಯನ್ನು ವಜಾಗೊಳಿಸಿತ್ತು.

      ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಚಿತ್ರ ಬಿಡುಗಡೆ ಆಗುತ್ತಿರುವುದಕ್ಕೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಅಲ್ಲದೆ, ಚಿತ್ರ ಬಿಡುಗಡೆಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ವಾದಿಸಿದ್ದವು. ಆದರೀಗ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಪೂರ್ವ ನಿಗದಿಯಂತೆ ಏಪ್ರಿಲ್ 5 ರಂದು ದೇಶಾದ್ಯಂತ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

LEAVE A REPLY

Please enter your comment!
Please enter your name here