ಮಹಾರಾಷ್ಟ್ರ :
ನಕಲಿ ಸಹಿ ಮತ್ತು ಮೋಸ ಮಾಡಿ ಬಚಾವ್ ಆಗಿದ್ದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ಗೆ ಗುರುವಾರ ಸಮನ್ಸ್ ಜಾರಿಗೊಳಿಸಲಾಗಿದೆ.
ಆತುರಾತುರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೂರೇ ದಿನಗಳಲ್ಲಿ ರಾಜೀನಾಮೆ ನೀಡಿ ಮುಖಭಂಗ ಅನುಭವಿಸಿದ್ದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ಗೆ ಈಗ ಹೊಸ ಕಂಟಕ ಎದುರಾಗಿದೆ. 13 ವರ್ಷಗಳ ಹಿಂದೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ವೇಳೆ ಚುನಾವಣಾ ಆಯೋಗಕ್ಕೆ ನೀಡಿದ ಅಫಿಡವಿಟ್ ನಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ 2 ಕ್ರಿಮಿನಲ್ ಪ್ರಕರಣಗಳ ಕುರಿತು ಉಲ್ಲೇಖಿಸಿರಲಿಲ್ಲವೆಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವೀಸ್ ಅವರಿಗೆ ಈಗ ಸಮನ್ಸ್ ಜಾರಿಗೊಳಿಸಲಾಗಿದೆ.
ಎರಡನೇ ಅವಧಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ದೇವೇಂದ್ರ ಫಡ್ನವಿಸ್ ಕೇವಲ ನಾಲ್ಕು ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಹುಮತ ಸಾಬೀತಿಗೆ ಅಗತ್ಯವಾದ ಶಾಸಕರ ಬೆಂಬಲ ತಮಗೆ ಸಿಗುವ ಸಾಧ್ಯತೆ ಇಲ್ಲದ ಕಾರಣ ಅವರು ಈ ತೀರ್ಮಾನ ಕೈಗೊಂಡಿದ್ದರು.
ಮಹಾರಾಷ್ಟ್ರದಲ್ಲಿ ಈಗ ಕಾಂಗ್ರೆಸ್ ಹಾಗೂ ಎನ್.ಸಿ.ಪಿ. ಬೆಂಬಲದೊಂದಿಗೆ ಶಿವಸೇನೆ ಸರ್ಕಾರ ರಚಿಸಿದ್ದು, ಗುರುವಾರದಂದು ಮುಖ್ಯಮಂತ್ರಿಯಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ