ನವದೆಹಲಿ:
ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಹಾಗೂ ಇತರೆ ನಾಲ್ಕು ಮಂದಿ ಆರೋಪಿತರಿಗೆ ಮತ್ತೊಂದು ಪ್ರಕರಣದಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ಶುಕ್ರವಾರ ತೀರ್ಪುನೀಡಿದೆ.
ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ದೋಷ ಸಾಬೀತಾಗಿ ಅಜೀವ ಜೈಲು ಶಿಕ್ಷೆಗೆ ಗುರಿಯಾಗಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲ್ದೀಪ್ ಸಿಂಗ್ ಸೇಂಗರ್, ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣ ದೀಪ್ ಸಿಂಗ್ ಸೇಂಗರ್, ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.
ಆರೋಪಿ ಕುಲದೀಪ್ ಸಿಂಗ್ 2017ರಲ್ಲಿ 17 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ, ಇದಲ್ಲದೆ, ಬಾಲಕಿಯ ತಂದೆಯನ್ನು ಮೇಲೆ ಸುಳ್ಳು ಕೇಸು ದಾಖಲಿಸಿ, ಹಲ್ಲೆಯನ್ನೂ ನಡೆಸಿದ್ದೂ ಅಲ್ಲದೇ ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿದ್ದರು. ನಂತರ ಆತ ಠಾಣೆಯಲ್ಲಿಯೇ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಸಾವಿನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಕುಲದೀಪ್ ಸಿಂಗ್ ಸೋದರ ಜೈದೀಪ್ ಅಲಿಯಾಸ್ ಅತುಲ್ ಸಿಂಗ್ ಇಬ್ಬರೂ ತಲಾ ₹10ಲಕ್ಷ ಹಣವನ್ನು ಪರಿಹಾರವಾಗಿ ಸಂತ್ರಸ್ತೆಯ ಕುಟುಂಬಕ್ಕೆ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
