ನವದೆಹಲಿ:
ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೌತಮ್ ಗಂಭೀರ್ ಅವರು ಏ.25ರಂದು ದೆಹಲಿಯ ಜಂಗ್ಪುರಾದಲ್ಲಿ ಚುನಾವಣಾ ರ‍್ಯಾಲಿ ನಡೆಸಿದ್ದರು. ಅನುಮತಿ ಪಡೆಯದೆ ಎರಡು ಕಡೆ ರ್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಎಫ್‍ಐಆರ್ ದಾಖಲಿಸುವಂತೆ ಆದೇಶಿಸಿದ್ದಾರೆ.
ಚುನಾವಣಾ ಅಧಿಕಾರಿಗಳ ಆದೇಶದ ಮೇರೆಗೆ ದೆಹಲಿ ಪೊಲೀಸರು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
ಭಾರತ ಆರಂಭಿಕ ಆಟಗಾರರಾಗಿದ್ದ ಗಂಬೀರ್ ಪೂರ್ವ ದೆಹಲಿ ಸಂಸದೀಯ ಕ್ಷೇತ್ರದಿಂಡ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅರ್ವಿಂದರ್ ಸಿಂಗ್ ಲವ್ಲಿ ಹಾಗೂ ಎಪಿನ ಅತೀಷಿ ಎದುರು ಗಂಭೀರ್ ಸ್ಪರ್ಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
