ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ನಂದಕಿಶೋರ್ ನಿರ್ದೇಶನ ಮಾಡ್ತಿರುವ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿರುವ ಧ್ರುವ ಇತ್ತೀಚಿಗಷ್ಟೆ ತಮ್ಮ 29ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದರು.
ಹುಟ್ಟುಹಬ್ಬದ ಸಂದರ್ಭದಲ್ಲಿ, ಧ್ರುವಾ ಸರ್ಜಾ ಅಭಿಮಾನಿಗಳು ನಿಯಮವನ್ನ ಉಲ್ಲಂಘಿಸಿ, ಕಟೌಟ್ ಮತ್ತು ಫ್ಲೆಕ್ಸ್ಗಳನ್ನ ಹಾಕಿದ್ದರು. ಈ ಕುರಿತು ಬನಶಂಕರಿ ಉಪ ವಿಭಾಗದ ಬಿಬಿಎಂಪಿ ಅಧಿಕಾರಿಯೊಬ್ಬರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು, ಧ್ರುವ ಸರ್ಜಾ ಮತ್ತು ಅಭಿಮಾನಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಎಫ್.ಐ.ಆರ್ ಹಾಕಿದ್ದಾರೆ.
ಫ್ಲೆಕ್ಸ್, ಕಟೌಟ್, ಬ್ಯಾನರ್ ಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಎಂದು ಹೈಕೋರ್ಟ್ ಆದೇಶವಿದೆ. ಈ ಸೂಚನೆಯ ಮೆರೆಗೆ ಬಿಬಿಎಂಪಿ ನಗರದಲ್ಲಿ ಫ್ಲೆಕ್ಸ್, ಬ್ಯಾನರ್, ಕಟೌಟ್, ಬಂಟಿಂಗ್ಸ್, ಹೋರ್ಡಿಂಗ್ ಹಾಕುವುದನ್ನ ನಿಯಂತ್ರಣ ಮಾಡುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ