ದೆಹಲಿ:
ಇಂದು ಬೆಳಗ್ಗೆ 8.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿತ್ತು.
ಘಟನೆಯಿಂದ ಭದ್ರತಾ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ. ಸ್ಥಳಕ್ಕೆ 24 ಅಗ್ನಿ ಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹಾಗೂ ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಅಗ್ನಿ ದುರಂತದಲ್ಲಿ ಹಲವಾರು ಮಹತ್ವದ ಸರ್ಕಾರಿ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಘಟನೆಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಈ ಬಹುಮಹಡಿ ಕಟ್ಟಡದಲ್ಲಿ ಭಾರತೀಯ ವಾಯುಪಡೆ ಶಾಖೆ, ನೀರು ಮತ್ತು ನೈರ್ಮಲ್ಯ ಸಚಿವಾಲಯ, ಅರಣ್ಯ ಸಚಿವಾಲಯ, , ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಅಂತ್ಯೋದಯ ಭವನದಲ್ಲಿದೆ ಎಂದು ವರದಿ ಹೇಳಿದೆ.
2016ರವರೆಗೆ ಈ ಭವನವನ್ನು ಪರ್ಯಾವರಣ್ ಭವನ್ ಎಂದೇ ಕರೆಯಲಾಗುತ್ತಿತ್ತು.ಬಳಿಕ ದೀನ್ ದಯಾಳ್ ಅಂತ್ಯೋದಯ ಭವನ್ ಎಂದು ಮರು ನಾಮಕರಣ ಮಾಡಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ