ಸೆರಂ ಇನ್ಸ್ ಟಿಟ್ಯೂಟ್ ಘಟಕದಲ್ಲಿ ಭಾರಿ ಅಗ್ನಿ ಅವಘಡ!!

ಪುಣೆ :  

      ದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

    ಪುಣೆಯ ಮಂಜಿರಾ ಪ್ರದೇಶದಲ್ಲಿರುವ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ 4 ನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

     ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಆದರೆ ನಿರ್ಮಾಣ ಹಂತದಲ್ಲಿರುವ, ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ. ಹೀಗಾಗಿ ಲಸಿಕೆ ತಯಾರಿಕೆಯ ಮೇಲೆ ಅಗ್ನಿ ಅವಘಡದಿಂದ ಯಾವುದೇ ರೀತಿಯ ಪರಿಣಾಮವಾಗುವುದಿಲ್ಲ ಎಂದು ಸಂಸ್ಥೆ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link