ವಿದ್ಯುತ್ ಪೂರೈಕೆ ಘಟಕದಲ್ಲಿ ಬೆಂಕಿ ಅನಾಹುತ!!

ಇಂದೋರ್​​:

      ಮಧ್ಯ ಪ್ರದೇಶದ ಇಂದೋರ್​ನ ವಿದ್ಯುತ್​ ಪೂರೈಕೆ ಮುಖ್ಯ ಘಟಕವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

      ಟ್ರಾನ್ಸ್​ಫಾರ್ಮರ್​ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ವಿದ್ಯುತ್​ ಪೂರೈಕೆ ಘಟಕವನ್ನ ಆವರಿಸಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ.

      ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ಅವಘಡದಿಂದ ವಿದ್ಯುತ್​ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದೆ ಎನ್ನಲಾಗಿದೆ. ಇನ್ನು ಘಟನೆಗೆ ಕಾರಣ ಏನು ಅಂತಾ ಇನ್ನೂ ತಿಳಿದು ಬಂದಿಲ್ಲ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link