ಚಿತ್ತೂರು :
ತಿರುಪತಿ ತಿಮ್ಮಪ್ಪನ ದರ್ಶನ ಮಾಡಿಕೊಂಡು ಕಾರಿನಲ್ಲಿ ವಾಪಾಸ್ಸಾಗುತ್ತಿದ್ದ ಬೆಂಗಳೂರಿನ ಕುಟುಂಬವೊಂದು ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಐವರು ಸಜೀವ ದಹನವಾಗಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,
ಅತಿ ವೇಗವಾಗಿ ಚಲಿಸುತ್ತಿದ್ದ ಎರ್ಟಿಗಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ. ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ. ದುರದೃಷ್ಟವಶಾತ್ ಕಾರಿನ ಬಾಗಿಲುಗಳು ಲಾಕ್ ಆಗಿದ್ದರಿಂದ ಹೊರಬರಲು ಒಳಗಿದ್ದವರು ಪ್ರಯತ್ನಿಸಿದ್ದು ಸಾಧ್ಯವಾಗದೆ ಸಜೀವ ದಹನವಾಗಿರುವುದು ದುರಂತದ ಸಂಗತಿ.
ಮೃತರನ್ನು ಜಾಹ್ನವಿ, ಕಲಾ, ಭಾನುತೇಜ, ಪಾವನಾ ರಾಮ್, ಸಾಯಿ ಅಶಿತಾ ಎಂದು ಗುರುತಿಸಲಾಗಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಘಟನೆಯಲ್ಲಿ ಕಾರಿನಲ್ಲಿದ್ದ ವಿಷ್ಣು ಎಂಬುವವರು ಅಚ್ಚರಿಯ ರೀತಿಯಲ್ಲಿ ಕಾರಿನಿಂದ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೂ ಸಹ ಬೆಂಕಿ ತಗುಲಿದ್ದರಿಂದ ಅವರನ್ನು ಪಲಮನೇರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಧಾವಿಸಿದ ಗಂಗಾವರಂ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
