ದೆಹಲಿ:
ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದ ಫ್ರಾನ್ಸ್ ಮೂಲದ ರಫೇಲ್ ಯುದ್ಧ ವಿಮಾನ ಮುಂದಿನ ತಿಂಗಳು ಭಾರತಕ್ಕೆ ಆಗಮಿಸಲಿದೆ.
ಭಾರತೀಯ ವಾಯುಪಡೆಗೆ 36 ರಫೇಲ್ ಯುದ್ಧ ವಿಮಾನಗಳನ್ನು ಬರಮಾಡಿಕೊಳ್ಳಲು ಮುಂದಿನ ತಿಂಗಳು ಸೆಪ್ಟೆಂಬರ್ 20 ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಏರ್ ಚೀಫ್ ಮಾರ್ಷಲ್ ಬಿ.ಎಸ್.ಧನೋವಾ ಪ್ಯಾರಿಸ್‍ಗೆ ಪ್ರಯಾಣ ಬೆಳೆಸಲಿದ್ದಾರೆ. ಇದೇ ಸಮಾರಂಭದಲ್ಲಿ ಫ್ರಾನ್ಸ್ನ ಡಸ್ಸೌಲ್ಟ್ ಎಂಬುವರು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತಿಯಲ್ಲಿ ಭಾರತಕ್ಕೆ ರಫೆಲ್ ಯುದ್ಧ ವಿಮಾನ ಹಸ್ತಾಂತರ ಮಾಡಲಿದ್ದಾರೆ.
ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಸಂಬಂಧ ಮುಂದಿನ ಗುರುವಾರ ಪ್ಯಾರಿಸ್‍ಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಭಾರತೀಯ ವಾಯುಸೇನೆ ಅಧಿಕಾರಿಗಳ ಜೊತೆಗೆ ಹಸ್ತಾಂತರ ಪ್ರಕ್ರಿಯೆ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.
ಸುಮಾರು 58 ಸಾವಿರ ಕೋಟಿ ರೂಪಾಯಿ ವೆಚ್ಚದ 36 ರಫೆಲ್ ಯುದ್ಧ ವಿಮಾನ ಖರೀದಿಗೆ ಭಾರತ ಸರ್ಕಾರ 2016ರ ಸೆಪ್ಟೆಂಬರ್ ನಲ್ಲಿ ಫ್ರಾನ್ಸ್ ಸರ್ಕಾರದೊಂದಿಗೆ ಅಂತರ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ