ಮದುರೈ :
ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟಿರುವ ದುರ್ಘಟನೆ ಮಧುರೈನಲ್ಲಿ ನಡೆದಿದೆ.
ಪಟಾಕಿ ತಯಾರಿಸಲು ಬಳಸುವ ರಾಸಾಯನಿಕ ಮಿಶ್ರಣದಲ್ಲಿ ಘರ್ಷಣೆಯಿಂದಾಗಿ ಬೆಂಕಿ ಉಂಟಾಗಿರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದಿರುವುದಾಗಿ ಪೊಲೀಸರು ಹೇಳಿದ್ದಾರೆ. ಸುದ್ದಿ ತಿಳಿದ ಕೂಡಲೆ ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.
ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಹಲವು ಕಾರ್ಮಿಕರು ಸ್ಫೋಟದಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ಹೋದರೆ, ಐದು ಜನ ಸಾವಿಗೀಡಾಗಿದ್ದಾರೆ. ಇನ್ನು ತೀವ್ರ ಗಾಯಗೊಂಡ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ತನಿಖೆಗೆ ಆದೇಶಿಸಲಾಗಿದೆ.
ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದಂತೆ ತಮಿಳುನಾಡಿನ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಬೆಂಕಿ ಮತ್ತು ಸ್ಫೋಟ ದುರಂತಗಳು ಮರುಕಳಿಸುತ್ತಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
