ಮುಂಬೈ :
ಉದ್ಧವ್ ಠಾಕ್ರೆ ಮಹಾರಾಷ್ಟ್ರ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಮೋದಿಯವರನ್ನು ಭೇಟಿಯಾಗಿ ಮಹಾರಾಷ್ಟ್ರಕ್ಕೆ ಬರಮಾಡಿಕೊಂಡಿದ್ದಾರೆ .
ಮಹಾರಾಷ್ಟ್ರದಲ್ಲಿ ಇಂದು ನಡೆಯಲಿರುವ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಂಜೆ ಪುಣೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಎನ್‌ಸಿಪಿ, ಕಾಂಗ್ರೆಸ್, ಶಿವಸೇನಾ ಮೈತ್ರಿಯಿಂದ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಉದ್ಧವ್ ಠಾಕ್ರೆ. ಮುಖ್ಯಮಂತ್ರಿಯಾದಾಗಿನಿಂದಲೂ ಪಿಎಂ ನರೇಂದ್ರ ಮೋದಿಯವರನ್ನು ಭೇಟಿಯಾಗಿಲಿಲ್ಲ. ಆದರೆ ಇದೀಗ ಮಹಾರಾಷ್ಟ್ರದಲ್ಲಿ ನಡೆಯುವ ಕಾರ್ಯಕ್ರಮ ಅಂಗವಾಗಿ ಮೋದಿ ಭೇಟಿ ನೀಡಿದ್ದು, ಉದ್ಧವ್ ಠಾಕ್ರೆ ಭೇಟಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ