ನೆನ್ನೆ ರೋಷನ್ ಬೇಗ್ ಬಂಧನ : ಇಂದು ನಿವಾಸದ ಮೇಲೆ ಸಿಬಿಐ ದಾಳಿ!!

 ಬೆಂಗಳೂರು :

      ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್’ರನ್ನು ಬಂಧಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

      ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿದೆ. ಇಂದು ಬೆಳಗ್ಗೆಯಷ್ಟೇ ಬೇಗ್​ರನ್ನು ಸಿಬಿಐ ವಶಕ್ಕೆ ಪಡೆದಿತ್ತು. ವಿಚಾರಣೆ ಬಳಿಕ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿತ್ತು. 

      ಇದೀಗ ದೆಹಲಿ ಮೂಲದ ಇಬ್ಬರೂ ಮಹಿಳಾ ಅಧಿಕಾರಿಗಳು ಸೇರಿ 7ಕ್ಕೂ ಅಧಿಕ ಜನರ ತಂಡ ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ದಲ್ಲಿರುವ ರೋಷನ್ ಬೇಗ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ.

      ಸದ್ಯ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಸೇಂಟ್ರಲ್ ಜೈಲಿನಲ್ಲಿದ್ದಾರೆ. ಹಾಗಾಗಿ ದಾಳಿಯ ಕುರಿತು ಸಿಬಿಐ ಅಧಿಕಾರಿಗಳು ಅವರ ಪತ್ನಿಗೆ ಮಾಹಿತಿ ನೀಡಿ, ಕುಟುಂಬ ಸದಸ್ಯರ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

      ಐಎಂಎ ವಂಚನೆ ಪ್ರಕರಣದ ಕುರಿತಾಗಿ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ವಿಚಾರಣೆ ನಡೆಸಿದ್ದರು. ಪ್ರಕರಣದ ಪ್ರಮುಖ ಆರೋಪಿ‌ ಮನ್ಸೂರ್ ಮಾಡಿದ್ದ ಆರೋಪಗಳ ಸಾಕ್ಷ್ಯಾಧಾರ ದೊರೆತ ಹಿನ್ನೆಲೆಯಲ್ಲಿ ಬೇಗ್ ಅವರನ್ನು ಬಂಧಿಸಿದ್ದರು.

      ‘ರೋಷನ್ ಬೇಗ್ ತನ್ನಿಂದ ಹಣ ಪಡೆದುಕೊಂಡಿದ್ದರು. ಹಣ ವಾಪಸ್ ಕೇಳಿದಾಗ ರೌಡಿಗಳಿಂದ ಜೀವಬೆದರಿಕೆ ಹಾಕಿಸಿದ್ದಾರೆ’ ಎಂದು ಆರೋಪಿಸಿ ಐಎಂಎ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿಬಿಟ್ಟಿದ್ದರು. ಇದೇ ಪ್ರಕರಣದಲ್ಲಿ ಹಿಂದೆ ತನಿಖೆ ನಡೆಸಿದ್ದ ಎಸ್‍ಐಟಿ ಸಹ ಬೇಗ್‌ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. 

     ‘ಮನ್ಸೂರ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದರಿಂದ ಸಿಬಿಐ ಅಧಿಕಾರಿಗಳು ರೋಷನ್ ಬೇಗ್‌ ಅವರನ್ನು ವಶಕ್ಕೆ ಪಡೆದಿದ್ದಾರೆ’ ಎಂದು ಮೂಲಗಳು ತಿಳಿಸಿವೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap