ನವದೆಹಲಿ:
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ನಿಧನರಾದರು.
ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದ ಆಲ್ಝೈಮರ್ ಎಂಬ ನೆನಪು ಶಕ್ತಿ ಕೊರತೆ ಮತ್ತು ಪಾರ್ಕಿನ್ಸನ್ ಎಂಬ ನರಕೋಶ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಇತ್ತೀಚೆಗೆ ಕೆಲ ದಿನಗಳಿಂದ ಅವರಿಗೆ ಹಂದಿ ಜ್ವರ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಫರ್ನಾಂಡಿಸ್ ರಕ್ಷಣಾ ಸಚಿವರಾಗಿದ್ದರು. ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್ 1930ರಲ್ಲಿ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಜನಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ