ನವದೆಹಲಿ:
ಕಳೆದ 8 ದಿನಗಳಿಂದ ದೆಹಲಿಯ ಏಮ್ಸ್ನಲ್ಲಿ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಚಿಕಿತ್ಸೆ ಪಡೆಯುತ್ತಿರುವ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಕಳೆದ ತಡರಾತ್ರಿ ಏಮ್ಸ್ ಆಸ್ಪತ್ರೆಗೆಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಷಾ, ಹರ್ಷವರ್ಧನ್ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು.
Delhi: Union Home Minister Amit Shah leaves from AIIMS (All India Institute of Medical Sciences) where BJP leader and former Union Minister Arun Jaitley is admitted. Union Health Minister Dr Harsh Vardhan is still present at the hospital. pic.twitter.com/2GOBUfgOyy
— ANI (@ANI) August 16, 2019
ಸುಮಾರು 1 ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಇದ್ದ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬಳಿಕ 12 ಗಂಟೆಗೆ ಆಸ್ಪತ್ರೆಯಿಂದ ನಿರ್ಗಮಿಸಿದರು. ಇಂದು ಸಹಾ ಆಸ್ಪತ್ರೆಗೆ ಮೋದಿ ಹಾಗೂ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಸದ್ಯ ಜೇಟ್ಲಿ ಅವರು ತೀವ್ರ ನಿಗಾ ಘಟಕದಲ್ಲಿದ್ದು, ಆಗಸ್ಟ್ 10ರ ನಂತರ ಆಸ್ಪತ್ರೆಯಿಂದ ಅವರ ಆರೋಗ್ಯದ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಇನ್ನು ಜೇಟ್ಲಿ ನಿವಾಸದ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ