ನವದೆಹಲಿ :
ಎದೆ ನೋವಿನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 2 ದಿನಗಳ ಹಿಂದೆ ಡಾ.ಮನ್ ಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದ ಕಾರಣ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು.
87 ವರ್ಷದ ಮನ್ ಮೋಹನ್ ಸಿಂಗ್ ಅವರಿಗೆ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡ ಪರಿಣಾಮ ಏಮ್ಸ್ ಗೆ ದಾಖಲು ಮಾಡಿ, ಎದೆರೋಗಿಗಳ ವಿಭಾಗದಲ್ಲಿ ನಿಗಾದಲ್ಲಿ ಇರಿಸಲಾಗಿತ್ತು. ತೀವ್ರ ನಿಗಾ ವಹಿಸಿದ ವೈದ್ಯರು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿ ಇಂದು ಡಿಸ್ಚಾರ್ಜ್ ಮಾಡಿದ್ದಾರೆ.
ಹಲವಾರು ನಾಯಕರು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
