ದೆಹಲಿ:
ಮಾಜಿ ರಾಷ್ಟ್ರಪತಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮ್ ನಾತ್ ಕೋವಿಂದ್ ಅವರು ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
ರಾಷ್ಟ್ರಪತಿ ಭವನದಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪ್ರಣಬ್ ಅವರ ಜತೆಗೆ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶ್‍ಮುಖ್ ಹಾಗೂ ಅಸ್ಸಾಮಿ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಭಾರತರತ್ನವನ್ನು ನೀಡಿ ಗೌರವಿಸಲಾಯಿತು.
ಕಾಂಗ್ರೆಸ್‌ನ ಪ್ರಣಬ್ ಮುಖರ್ಜಿ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿ ದೇಶದ ಅತ್ಯಂತ ಪ್ರಭಾವಿ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು. 2012ರಿಂದ 2017ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.
ಅಸ್ಸಾಂನ ಸಂಗೀತ ಮಾಂತ್ರಿಕ ದಿವಂಗತ ಭೂಪೇನ್ ಹಜಾರಿಕಾ, ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಜನಾಥ್ ಸಿಂಗ್, ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಚ್ಚರಿ ಎಂದರೆ ಗಾಂಧಿ ಕುಟುಂಬದ ಯಾರೊಬ್ಬರೂಪಾಲ್ಗೊಂಡಿರಲಿಲ್ಲ. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ