ಮಧ್ಯಪ್ರದೇಶ :
ಮಿನಿ ಟ್ರಕ್ ಪಲ್ಟಿಯಾಗಿ ನಾಲ್ವರು ದಾರುಣ ಸಾವನ್ನಪ್ಪಿ, 15 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಭಲೈ ತೋಲಾ ಗ್ರಾಮದಲ್ಲಿ ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೃತರೆಲ್ಲರೂ ಬರೇಲಿಯ ಹಳೆ ನಗರದ ನಿವಾಸಿಗಳೆಂದು ತಿಳಿದು ಬಂದಿದೆ. ಗಾಯಗೊಂಡ 10 ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಗೆ ಜಿಲ್ಲಾಧಿಕಾರಿ ರಾಜೀವ್ ರಂಜನ್ ಮೀನಾ, ಎಸ್ಪಿ ವೀರೇಂದ್ರ ಕುಮಾರ್ ಸಿಂಗ್ ಮತ್ತು ಶಾಸಕ ಸುಭಾಷ್ ರಾಮ್ ಚರಿತ್ ವರ್ಮಾ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
