ಮಹಾರಾಷ್ಟ್ರ:
ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಚಂದ್ರಪುರ-ಮೂಲ್ ರಸ್ತೆಯಲ್ಲಿ ಮಧ್ಯರಾತ್ರಿ ನಡೆದಿದೆ.
ಅಕ್ಕಿ ವ್ಯಾಪಾರಿ ರಾಜು ಪಟೇಲ್, ಅವರ ಪುತ್ರ ಸ್ಮಿತ್ ಮತ್ತು ಇತರ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/12/Car-accident-1.jpg)