ಮಹಾರಾಷ್ಟ್ರ:
ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ ಯವತ್ಮಾಲ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ಸು ಮಹಾರಾಷ್ಟ್ರದ ಸೋಲಾಪುರದಿಂದ ಜಾರ್ಖಂಡ್ ಗೆ ಸಂಚರಿಸುತ್ತಿತ್ತು. ಇಂದು ನಸುಕಿನ ಜಾವ 3.30 ಸುಮಾರಿಗೆ ಸೋಲಾಪುರದಿಂದ ನಾಗ್ಪುರ ರೈಲ್ವೆ ನಿಲ್ದಾಣದ ಕಡೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅವರು ನಾಗ್ಪುರ ರೈಲು ನಿಲ್ದಾಣದಿಂದ ಶ್ರಮಿಕ್ ವಿಶೇಷ ರೈಲಿನಲ್ಲಿ ತಮ್ಮೂರು ಜಾರ್ಖಂಡ್ ಗೆ ಹೋಗಲು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ನೂರುಲ್ ಹಸನ್ ತಿಳಿಸಿದ್ದಾರೆ.
ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆಯಿತು. ನಾಲ್ವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಸ್ಪಿ ನೂರುಲ್ ಹಾಸನ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ