ಮುಂಬೈ:
ಕೇಂದ್ರ ಸರ್ಕಾರ ರೈಲ್ವೆ ಇಲಾಖೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದು, ಅದರಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸುವುದು ಕೂಡ ಒಂದಾಗಿದೆ.
ದೇಶದಾದ್ಯಂತ 6000 ರೈಲ್ವೆ ನಿಲ್ದಾಣಗಳಲ್ಲಿ ಮುಂದಿನ 120 ದಿನಗಳಲ್ಲಿ ಉಚಿತ ವೈಫೈ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಶುಕ್ರವಾರ ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಲೋಕದ ಜಾಗತಿಕ ದೈತ್ಯ ಗೂಗಲ್ ಸಹಭಾಗಿತ್ವದಲ್ಲಿ ಉಚಿತ ವೈಫೈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ದೇಶದಾದ್ಯಂತ ಸುಮಾರು 711 ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈಫೈ ಸೌಲಭ್ಯ ನೀಡಲಾಗುತ್ತಿದೆ ಎಂದು ಪಿಯೂಶ್ ಗೋಯಲ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ